ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆ
ಬೆಂಗಳೂರು, 19 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಇಂದಿನಿಂದ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು. ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಎರಡು-ಮೂರು ದಿನಗಳಿಂದಲೂ ಮಳೆ ಪ್ರಮಾಣ ಕಡಿಮೆಯಾಗಿದೆ‌ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ. ಕರಾವಳಿಯಾದ್ಯಂತ ಬು
Rain


ಬೆಂಗಳೂರು, 19 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಇಂದಿನಿಂದ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು. ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಎರಡು-ಮೂರು ದಿನಗಳಿಂದಲೂ ಮಳೆ ಪ್ರಮಾಣ ಕಡಿಮೆಯಾಗಿದೆ‌ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಕರಾವಳಿಯಾದ್ಯಂತ ಬುಧವಾರದಿಂದ ಮಳೆ ಕ್ಷೀಣಗೊಂಡಿದ್ದು, ಬಿಸಿಲು ಹಾಗೂ ಮೋಡ ಕವಿದ ವಾತಾವರಣವಿತ್ತು. ಹಲವೆಡೆ ಆಗಾಗ ಸಾಧಾರಣ ಮಳೆ ಸುರಿದಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 3 ದಿನ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಿದ್ದು. ಆದರೆ, ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಪ್ರಬಲಕ್ಕೆ ಪೂರಕ ವಾತಾವರಣ ಇಲ್ಲದ ಕಾರಣ ಇಂದಿನಿಂದ ಆ ಭಾಗಗಳಲ್ಲಿ ಮಳೆ ಇನ್ನಷ್ಟು ಕ್ಷೀಣವಾಗಲಿದೆ ಎಂದು ಹವಾಮಾ‌ನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಈ ವೇಳೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಗಿಂತ ಗಾಳಿಯ ವೇಗವೇ ಹೆಚ್ಚಳವಾಗುತ್ತಿದೆ.

ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಜೂನ್ 25ರ ವರೆಗೆ ಸಾಧಾರಣ ಮಳೆ ಮುಂದುವರೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande