ಬಳ್ಳಾರಿ, 02 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ದ್ವಿತೀಯ ವರ್ಷದ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಐ.ಟಿ.ಐ ಮತ್ತು ದ್ವಿತೀಯ ಪಿ.ಯು.ಸಿ(ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಅರ್ಜಿಗಳನ್ನು ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 14 ಸಂಜೆ 05 ಗಂಟೆಯವರೆಗೆ ಸಲ್ಲಿಸಬಹುದು.
ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಅಂದು ಸಂಜೆ 03 ರ ವರೆಗೆ ತಿದ್ದುಪಡಿಗೆ ಅವಕಾಶ, ಸಂಜೆ 05 ಗಂಟೆಯವರೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 17 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್