ರಾಯಚೂರು, 2 ಜೂನ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿರಬೇಕು. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ-ಪ್ರವರ್ಗ1, ಪ್ರವರ್ಗ 2(ಎ), 3(ಎ) ಮತ್ತು 3(ಬಿ) ಗಳಿಗೆ 5 ಲಕ್ಷ ರೂ. ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು. ಆಸಕ್ತರು ಅರ್ಜಿಯನ್ನು ಆನ್‍ಲೈನ್ ಮೂಲಕ ಜೂನ್ 15ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in. ಭೇಟಿ ನೀಡಬಹುದಾಗಿದೆ. ಅಥವಾ ಸಹಾಯವಾಣಿ: 8050770006ಗೆ ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್