ರಾಯಚೂರು, 2 ಜೂನ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗೆ 2025-26ನೇ ಸಾಲಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ, ಐ.ಟಿ.ಐ ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ ವೆಬ್ಸೈಟ್ ವಿಳಾಸ: https//shp.karnataka.gov.in. . ನ ಮೂಲಕ ಜೂನ್ 28 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಅರ್ಹತೆಗಳು: ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ್ದು, ರಾಜ್ಯದ ನಿವಾಸಿಯಾಗಿರಬೇಕು. ಸರ್ಕಾರದಿಂದ ಅಂಗೀಕೃತವಾದ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಪಿಯುಸಿ, ಐ.ಟಿ.ಐ ಡಿಪ್ಲೋಮಾ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
ವಿದ್ಯಾರ್ಥಿ ನಿಲಯಗಳಗೆ ಪ್ರವೇಶ ಪಡೆಯುುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷ ಮೀರಿರಬಾರದು. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶಕ್ಕೆ ಅನರ್ಹರು. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಕೋರಿ ಅರ್ಜಿಸಲ್ಲಿವ ವಿದ್ಯಾರ್ಥಿಗಳ ವಯೋಮಿತಿಯನ್ನು 16 ರಿಂದ 26ಕ್ಕೆ ನಿಗದಿಪಡಿಸಿದೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ವಯೋಮಿತಿ ಇರುವುದಿಲ್ಲ.
ಮೀಸಲಾತಿ: ಪ್ರತಿ ವಿದ್ಯಾರ್ಥಿ ನಿಲಯಗಳಲ್ಲಿ ಶೇ.75ರಷ್ಷು ಸ್ಥಾನಗಳನ್ನು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ಶೇ.25 ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಗುತ್ತದೆ. ವಿದ್ಯಾರ್ಥಿ ನಿಲಯಗಳಲ್ಲಿ ಅಲ್ಪಸಂಖ್ಯಾತರ ಶೇ.75ರಷ್ಟು ಸ್ಥಾನಗಳ ಪೈಕಿ ಮುಸ್ಲಿಂ ಸಮುದಾಯಕ್ಕೆ ಶೇ.82ರಷ್ಟು, ಕ್ರಿಶ್ಚಿಯನ್ ಸಮುದಾಯಕ್ಕೆ ಶೇ.12ರಷ್ಟು, ಜೈನ್ ಸಮುದಾಯಕ್ಕೆ ಶೇ.4 ರಷ್ಟು, ಬೌದ್ಧ ಸಮುದಾಯಕ್ಕೆ ಶೇ.1ರಷ್ಟು, ಸಿಖ್ ಅಥವಾ ಪಾರ್ಸಿ ಸಮುದಾಯಕ್ಕೆ ಶೇ.1ರಷ್ಟು ಪ್ರಮಾಣದಲ್ಲಿ ಪ್ರವೇಶ ನೀಡಲಾಗುತ್ತದೆ. ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳಿಂದ ಸಾಕಷ್ಟು ಪ್ರಮಾಣದಲ್ಲಿ ಅರ್ಜಿಗಳು ಬಾರದಿದ್ದಲ್ಲಿ ಲಭ್ಯವಿರುವ ಇತರೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಭರ್ತಿ ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ರಾಯಚೂರು ದೂರವಾಣಿ ಸಂಖ್ಯೆ: 9731028420, 9148233616ಗೆ ಅಥವಾ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಅರಿವು ಮೂಡಿಸುವ ಮಾಹಿತಿ ಕೇಂದ್ರ ಹಾಗೂ ಹತ್ತಿರದ ವಸತಿ ನಿಲಯಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್