ಬಳ್ಳಾರಿ, 02 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ ಇರುವ ಎಲ್ಲಾ ಕ್ರೈಸ್ ಶಾಲೆಗಳ ಕಾಯಂ ಶಿಕ್ಷಕರು - ಸಿಬ್ಬಂದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರದಿಂದ ಪ್ರತಿಭಟನೆ ಆರಂಭವಾಗಿದೆ.
ಬಳ್ಳಾ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ಪ್ರಾರಂಭವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಕಾಯಂ ಶಿಕ್ಷಕರು-ನೌಕರರು ಹಲವು ಸೌಲಭ್ಯ ಗಳಿಂದ ವಂಚಿತರಾಗಿದ್ದು, ನಮ್ಮ ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಕೋರಿದರು.
ವಸತಿ ಶಿಕ್ಷಣ ನಿರ್ದೇಶನಾಲಯದ ಎಸ್.ಸಿ/ಎಸ್.ಟಿ/ಓಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ಅಧೀನಕ್ಕೆ ತರಬೇಕು. ಜ್ಯೋತಿ ಸಂಜೀವಿನಿ ಅನುಷ್ಠಾನ, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯಗಳನ್ನು ನೀಡಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಶೇ. 10 ರಷ್ಟು ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್