ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತ : ಬಿ.ವೈ. ವಿಜಯೇಂದ್ರ
ಕುಷ್ಟಗಿ, 02 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಜನರು ಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರ
ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತ : ಬಿ.ವೈ. ವಿಜಯೇಂದ್ರ


ಕುಷ್ಟಗಿ, 02 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಜನರು ಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರ ಪಟ್ಟಣಕ್ಕೆ ಆಗಮಿಸಿದ್ದ ಅವರು, ಸುದ್ದಿಗಾರರ ಜೊತೆ ಮಾತನಾಡಿ, ಕರ್ನಾಟಕದ 224 ವಿಧಾನ ಸಭಾ ಕ್ಷೇತ್ರದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾಮಗಾರಿಗಳು - ಕೆಲಸಗಳು ನಡೆದಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಬಂಡತನದಿಂದ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದರು.

ಕರ್ನಾಟಕ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರ ಜಾಹೀರಾತು ಸರ್ಕಾರವಾಗಿದೆ. ಕೇವಲ ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಮೂಲಕ ಸರ್ಕಾರದ ಹಣವನ್ನು ಪೋಲು ಮಾಡುವ ಜಾತ್ರೆಯ ಸರ್ಕಾರ ಇದಾಗಿದೆ. ಭಾರತೀಯ ಜನತಾ ಪಾರ್ಟಿ ಪ್ರತಿ ಪಕ್ಷವಾಗಿ ಗಟ್ಟಿತನದಿಂದ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುತ್ತಿದೆ ಎಂದರು.

ಕರ್ನಾಟಕದ ಕರಾವಳಿ ಭಾಗದಲ್ಲಿ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಒಬ್ಬ ಮುಸಲ್ಮಾನನ ಹತ್ಯೆಯಾಗಿದೆ. ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವ ಕಾರಣ ಕರಾವಳಿಯಲ್ಲಿ ಕಾನೂನು ವ್ಯವಸ್ಥೆ ದಿನೇ ದಿನೇ ಹದಗೆಡುತ್ತಿದೆ ಎಂದು ಟೀಕಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande