ಜಾಗತಿಕ ವಿಮಾನಯಾನ ಸಿಇಒಗಳ ಸಭೆ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಜಾಗತಿಕ ವಿಮಾನಯಾನ ಕ್ಷೇತ್ರದ ಸಿಇಒಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರ
CEO meeting


ನವದೆಹಲಿ, 02 ಜೂನ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಜಾಗತಿಕ ವಿಮಾನಯಾನ ಕ್ಷೇತ್ರದ ಸಿಇಒಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸಭೆಯಲ್ಲಿ ವಿಶ್ವದರ್ಜೆಯ ವಾಯುಯಾನ ಮೂಲಸೌಕರ್ಯ ಅಭಿವೃದ್ಧಿ, ಇಂಧನ ಭದ್ರತೆ, ಸುಸ್ಥಿರ ಇಂಧನ, ನಾವೀನ್ಯತೆ ಮತ್ತು ವಾಯು ಸಂಪರ್ಕ ವಿಸ್ತರಣೆ ಕುರಿತು ಚರ್ಚೆಯಾಗಲಿದೆ. 42 ವರ್ಷಗಳ ಬಳಿಕ ಭಾರತದಲ್ಲಿ ಈ ಸಭೆ ನಡೆಯುತ್ತಿರುವುದು ವಿಶೇಷ. 1,600ಕ್ಕೂ ಹೆಚ್ಚು ಪ್ರತಿನಿಧಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande