ನವದೆಹಲಿ, 02 ಜೂನ್ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಭಾರಿ ಏರಿಕೆಯಾಗಿದೆ, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹97,790ಕ್ಕೆ ತಲುಪಿದೆ. 22 ಕ್ಯಾರೆಟ್ ಚಿನ್ನದ ದರ ₹89,650 ಆಗಿದೆ.
ಬೆಳ್ಳಿಯು ಪ್ರತಿ ಕಿಲೋಗ್ರಾಂಗೆ ₹1 ಲಕ್ಷಕ್ಕೆ ತಲುಪಿದ್ದು, ಮುಂಬೈ, ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿ ದೇಶದ ಎಲ್ಲಾ ಪ್ರಮುಖ ಮಾರುಕಟ್ಟೆಗಳಲ್ಲಿ ಚಿನ್ನದ ದರ ಏರಿಕೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa