ಕಮಲ್ ಹಾಸನ್ ನಟನೆಯ ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಅನುಮಾನ
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ತಮಿಳಿನಿಂದ ಕನ್ನಡ ಹುಟ್ಟಿದದ್ದೆಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿನಯದ ಬಹುನಿರೀಕ್ಷಿತ 'ಥಗ್ ಲೈಫ್' ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾಗುವುದು ಅನುಮಾನವಾಗಿದ
Kamal


ಬೆಂಗಳೂರು, 02 ಜೂನ್ (ಹಿ.ಸ.) :

ಆ್ಯಂಕರ್ : ತಮಿಳಿನಿಂದ ಕನ್ನಡ ಹುಟ್ಟಿದದ್ದೆಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿನಯದ ಬಹುನಿರೀಕ್ಷಿತ 'ಥಗ್ ಲೈಫ್' ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾಗುವುದು ಅನುಮಾನವಾಗಿದೆ.

ಕನ್ನಡ ಪರ ಹೋರಾಟಗಾರರು, ರಾಜಕೀಯ ಮುಖಂಡರು ಮತ್ತು ಕನ್ನಡ ಚಿತ್ರರಂಗದ ಸಾಹಿತಿಗಳು ಕಮಲ್ ಹಾಸನ್ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ. ಚಿತ್ರ ಬಿಡುಗಡೆ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀವ್ರ ನಿರ್ಧಾರ ಕೈಗೊಂಡಿದ್ದು, ಯುಎಫ್‌ಒ, ಕ್ಯೂಬ್, ಬುಕ್ ಮೈ ಶೋ ಸೇರಿದಂತೆ ಮಲ್ಟಿಪ್ಲೆಕ್ಸ್ ವಿತರಕರು, ಪ್ರದರ್ಶಕರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು‌ ತಿಳಿಸಿದ್ದಾರೆ.

'ಥಗ್ ಲೈಫ್' ನಿರ್ಮಾಣ ತಂಡವು ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯದ ಆದೇಶದತ್ತ ಎಲ್ಲರ ಕಣ್ಣಿದೆ. ಚಿತ್ರ ವಿತರಕರು, ವಿಶೇಷವಾಗಿ ವೆಂಕಟೇಶ್ ಅವರಿಂದ ನಾಳೆ ಕಮಲ್ ಹಾಸನ್ ಕ್ಷಮೆ ಕೇಳುವರೇ ಎಂಬುದು ಸ್ಪಷ್ಟವಾಗಲಿದೆ.

ಮಂಗಳವಾರ ಮಧ್ಯಾಹ್ನ ಈ ಕುರಿತು ಫಿಲ್ಮ್ ಚೇಂಬರ್ ಸಭೆ ಕರೆಯಲಾಗಿದೆ. ಕಮಲ್ ಹಾಸನ್ ಕ್ಷಮೆ ಕೇಳಿದರೆ ಚಿತ್ರ ಬಿಡುಗಡೆಗೆ ಅವಕಾಶ ಸಿಗಬಹುದು. ಇಲ್ಲವಾದರೆ, ಚಿತ್ರ ಬಿಡುಗಡೆ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande