ಬಳ್ಳಾರಿ, 02 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಕೌಲ್‍ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಗಳು ನೂರ್ ಮಹಮ್ಮದ್ (27) ಮತ್ತು ಸಿ. ಮಹಮ್ಮದ್ ಉಜೈರ್ (27).
ಬಂಧಿತರಿಂದ 88 ಸಾವಿರ ರೂಪಾಯಿ ಮೌಲ್ಯದ 1.78 ಕೆ.ಜಿ ಗಾಂಜಾ ಮತ್ತು 1,900 ರೂಪಾಯಿ ನಗದು ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್