ಹಿಂದೂಗಳನ್ನು ಗುರಿಯಾಗಿಸಿ ಟಾಸ್ಕ್‌ ಫೋರ್ಸ್‌ ರಚನೆ : ಅಶೋಕ
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ರಚನೆ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಬೆಂಗಳೂರಿನಲ
Ashok


ಬೆಂಗಳೂರು, 02 ಜೂನ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ರಚನೆ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಅಪಾದನೆ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಅಶೋಕ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande