ಬಳ್ಳಾರಿ, 02 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಘೋಷವಾಕ್ಯದೊಂದಿಗೆ ಜೂನ್ 05 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹಿಂದುರಾವ್ ಸೂರ್ಯವಂಶಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಜಯನಗರ ಪ್ರಾದೇಶಿಕ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ, ಬಳ್ಳಾರಿ ಬಿಸಿನೆಸ್ ಕಾಲೇಜಿನ ನಿರ್ದೇಶಕ ಅಮರ್ ರಾಜ್ ಭೂಪಾಲ್, ಕನ್ನಡ ಉಪನ್ಯಾಸಕ ಪ್ರಭಾಕರ್ ಜೋಯಿಸ್ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್