ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿ
ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 25 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ವಿದ್ಯಾರ್ಥಿಗಳ ಪೆÇೀಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳ ಪೆÇೀಷಕರ ವಾರ್ಷಿಕ ಆದಾಯ ರೂ. 1ಲಕ್ಷ ಮಿತಿಯಲ್ಲಿರಬೇಕು.

ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://shp.karnataka.gov.in/bcwd ನಲ್ಲಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ, ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande