ಬಳ್ಳಾರಿ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಸಾಧನೆ ಪೋಟೋ ಪ್ರದರ್ಶನ
ಬಳ್ಳಾರಿ, 20 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ಆಶ್ವಾಸನೆ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,
ಬಳ್ಳಾರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಪೋಟೋ ಪ್ರದರ್ಶನ


ಬಳ್ಳಾರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಪೋಟೋ ಪ್ರದರ್ಶನ


ಬಳ್ಳಾರಿ, 20 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ಆಶ್ವಾಸನೆ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಟ್ಯಾಂಕ್ ಬಂಡ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲ್ಷಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಐದು ಯೋಜನೆಗಳನ್ನು ಜಾರಿಗೊಳಿಸಿದಾಗ ಅನೇಕ ಟೀಕೆ-ಪ್ರಹಾರಗಳು ನಡೆದಿದ್ದವು. ಅವೆಲ್ಲವುಗಳನ್ನು ಮೆಟ್ಟಿನಿಂತು ರಾಜ್ಯ ಸರ್ಕಾರವು ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ ಎಂದರು.

ಬಳ್ಳಾರಿ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಶೇ.97.05 ರಷ್ಟು ಫಲಾಭವಿಗಳಿಗೆ ಗ್ಯಾರಂಟಿಗಳ ಸೌಲಭ್ಯಗಳು ಸಿಗುತ್ತಿವೆ ಎಂದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಭಾಗವಾನ್, ವಿಭಾಗೀಯ ಸಂಚಾರಾಧಿಕಾರಿ ಚಾಮರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ವಿ.ಸಿ. ಗುರುರಾಜ, ಸಿಬ್ಬಂದಿಗಳಾದ ವಿಜಯ್ ಕುಮಾರ್, ಹನುಮಂತಪ್ಪ, ಮಲ್ಲೇಶಪ್ಪ, ಹನುಮೇಶ್.ಹೆಚ್., ತೇಜ, ದಿವಾಕರ, ಶ್ರೀಧರ್ ಕಾವಲಿ, ರುದ್ರಮುನಿ ಸ್ವಾಮಿ ಸೇರಿದಂತೆ ಇತರರು ಇದ್ದರು.

*ಜೂ.26 ರ ವರೆಗೆ ವೀಕ್ಷಿಸಲು ಅವಕಾಶ:*

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವು ನಗರದ ಟ್ಯಾಂಕ್ ಬಂಡ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಜೂ.26 ರ ವರೆಗೆ ಇರಲಿದೆ. ಈ ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದ್ದು, ಭೇಟಿ ನೀಡಿ ವೀಕ್ಷಿಸಬಹುದು.

ವಸ್ತು ಪ್ರದರ್ಶನವು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲಾದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಮಾಹಿತಿ ಫಲಕ ಮತ್ತು ಸರ್ಕಾರದ ವಿವಿಧ ಯೋಜನೆಗಳ ಸಾಧನೆಯ ಮಾಹಿತಿ ಫಲಕಗಳು ಒಳಗೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande