ಬಳ್ಳಾರಿ, 20 ಜೂನ್ (ಹಿ.ಸ.) :
ಆ್ಯಂಕರ್ : ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಗ್ಗೆ 6 ಗಂಟೆಗೆ ತುಮಕೂರಿನಿಂದ ರಸ್ತೆಯ ಮೂಲಕ ಹೊರಟು, 10.30ಕ್ಕೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರು ಗ್ರಾಮಕ್ಕೆ ಆಗಮಿಸಿ, ಬೆಳಿಗ್ಗೆ 10.30 ರಿಂದ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ನಿರ್ಮಾಣಗೊಂಡಿರುವ ದಿವಂಗತ ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ರಿಂದ ಸಂಜೆ 4ರ ವರೆಗೆ ಕಾರ್ಯಕ್ರಮ ಕಾಯ್ದಿರಿಸಲಾಗಿದೆ. ನಂತರ ಅಂದು ಸಂಜೆ 4 ಗಂಟೆಗೆ ಶಿರೂರಿನಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್