ಕೊಪ್ಪಳ, 20 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳದ ಸಜ್ಜಿ ಓಣಿ ನಿವಾಸಿಯಾದ ಸಿದ್ದು ತಂದೆ ಶರಣಪ್ಪ ದೊಡ್ಡಮನಿ(27)ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕೊಪ್ಪಳ ನಗರ ಪೆÇಲೀಸ್ ಠಾಣೆಯಲ್ಲಿ ಗುನ್ನೆ ನಂ: 115/2025 ಕಲಂ: ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.
ವ್ಯಕ್ತಿಯ ಚಹರೆ:
ವ್ಯಕ್ತಿಯು 5.6 ಅಡಿ ಎತ್ತರವಿದ್ದು, ಸಾದಾಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ಕುರುಚಲು ಗಡ್ಡ ಹೊಂದಿದ್ದು, ಕನ್ನಡ, ಹಿಂದಿ ಭಾμÉ ಮಾತನಾಡುತ್ತಾರೆ. ಕಾಣೆಯಾದಾಗ ಬಿಳಿ ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.08539-230100, 230222, ನಗರ ಠಾಣೆ ಪಿಐ: 9480803745, ನಗರ ಠಾಣೆ ಪಿಎಸ್ಐ: 9449484086, 08539-220333 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕೊಪ್ಪಳ ನಗರ ಪೆÇಲೀಸ್ ಠಾಣೆ ಕೋರಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್