ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ, ಒಂಬತ್ತು ಮಂದಿ ಸಾವು
ಪುರುಲಿಯಾ, 20 ಜೂನ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿರುವ ಬಲರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಮ್ಶೋಲ್ ಗ್ರಾಮದ ಪ್ರಾಥಮಿಕ ಶಾಲೆಯ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಜೆಮ್ಶೆಡ್ಪುರ-ಪುರುಲಿಯಾ ರಾಷ್ಟ್ರೀಯ ಹೆದ್ದಾರಿ 18 ರ
Accident


ಪುರುಲಿಯಾ, 20 ಜೂನ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿರುವ ಬಲರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಮ್ಶೋಲ್ ಗ್ರಾಮದ ಪ್ರಾಥಮಿಕ ಶಾಲೆಯ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಜೆಮ್ಶೆಡ್ಪುರ-ಪುರುಲಿಯಾ ರಾಷ್ಟ್ರೀಯ ಹೆದ್ದಾರಿ 18 ರಲ್ಲಿ ಈ ಅಪಘಾತ ಸಂಭವಿಸಿದೆ.

ಬಲರಾಂಪುರದಿಂದ ಬರುತ್ತಿದ್ದ ಟ್ರ್ಯಾಕ್ಟರ್ ಮತ್ತು ಬೊಲೆರೊ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಉರುಳಿ ಬಿದ್ದು ಬೊಲೆರೊ ವಾಹನದಲ್ಲಿದ್ದ ೯ ಜನ ಸಾವನಪ್ಪಿದ್ದಾರೆ.

ಬೊಲೆರೊದಲ್ಲಿದ್ದ ಜನರು ಜಾರ್ಖಂಡ್‌ನ ನಿಮ್ಡಿ ಪ್ರದೇಶದಿಂದ ಪುರುಲಿಯಾಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು. ಸಮಾರಂಭದ ನಂತರ ಅವರು ನಿಮ್ಡಿಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande