ಬಳ್ಳಾರಿ, 21 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕ ರ್ನಾಟಕ ಸರ್ಕಾರವು ಕೆಇಎ(ಕರ್ನಾಟಕಪರೀಕ್ಷಾಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್ಪಿಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂ.30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೋ.ನವೀನ್ ಕುಮಾರ್ ಎಸ್.ಕೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್