ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆ : ಚಂದ್ರಶೇಖರ ಬಿ ಕಂದಕೂರ
ಗದಗ, 21 ಜೂನ್ (ಹಿ.ಸ.) : ಆ್ಯಂಕರ್ : ಹಿರೇಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಉತ್ಸಾಹದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸ್ಥಳೀಯ ಗಣ್ಯರ ಭಾಗವಹಿಸುವಿಕೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಪೋಟೋ


ಗದಗ, 21 ಜೂನ್ (ಹಿ.ಸ.) :

ಆ್ಯಂಕರ್ : ಹಿರೇಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಉತ್ಸಾಹದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸ್ಥಳೀಯ ಗಣ್ಯರ ಭಾಗವಹಿಸುವಿಕೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ವಹಿಸಿದ್ದರು. ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ತದನಂತರ, ಶಾಲಾ ವಿದ್ಯಾರ್ಥಿಗಳು ಯೋಗ ಶಿಕ್ಷಕರ ಮಾರ್ಗದರ್ಶನ ದಲ್ಲಿ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಯೋಗಾಸನಗಳಾದ ತಾಡಾಸನ, ವೃಕ್ಷಾಸನ, ಭುಜಂಗಾಸನ ಮತ್ತು ಶವಾಸನದಂತಹ ಸರಳ ಆಸನಗಳನ್ನು ಮಕ್ಕಳು ಸುಲಲಿತವಾಗಿ ಪ್ರದರ್ಶಿಸಿದರು, ಇದು ಎಲ್ಲರಿಂದಲೂ ಪ್ರಶಂಸೆಗೆ ಪಾತ್ರವಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿಗಳ ಯೋಗದ ಮಹತ್ವವನ್ನು ವಿವರಿಸಿದ ಅವರು, ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಇದನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದರು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಇದು ಮನಸ್ಸು, ದೇಹ ಮತ್ತು ಆತ್ಮದ ಸಾಮರಸ್ಯವನ್ನು ಸಾಧಿಸುವ ಒಂದು ಜೀವನ ಕಲೆ. ಇದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುತ್ತದೆ, ಎಂದು ಹೇಳಿದರು. ಯೋಗವು ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಜೀವನದಲ್ಲಿ ಶಿಸ್ತು ಮತ್ತು ಸಂಯಮ ವನ್ನು ತರುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಅವರು ತಿಳಿಸಿದರು. ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಎಲ್ಲರನ್ನು ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ತಾಲೂಕ ಪ್ರಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಮ್ ಏ ಫನಿಬಂಧ

ಮಾತನಾಡಿ, ಯೋಗವನ್ನು ಪ್ರತಿಯೊಬ್ಬ ಮನುಷ್ಯನು ಮಾಡಬೇಕು, ಇದರಿಂದ ಮಾನಸಿಕ ನೆಮ್ಮದಿ ದೊರಕುತ್ತದೆ. ವಿದ್ಯಾರ್ಥಿಗಳಿಗೆ ಯೋಗದ ಮೂಲಕ ಆರೋಗ್ಯಕರ ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮದ ಗಣ್ಯರು, ಪಾಲಕರು ಮತ್ತು ಶಿಕ್ಷಕರು ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು. ಕಾರ್ಯಕ್ರಮವು ರಾಷ್ಟ್ರಗೀತೆ ಯೊಂದಿಗೆ ಸಂಪನ್ನಗೊಂಡಿತು. ಈ ಯೋಗ ದಿನಾಚರಣೆಯು ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿ ಅಳವಡಿಸಿಕೊಳ್ಳಲು ಪ್ರೇರಣೆ ನೀಡಿತು.

ಈ ಸಂದರ್ಭದಲ್ಲಿ ತಾಲೂಕ ಅಕ್ಷರ ದಾಸೋಹದ ಸಹಾಯಕ ನಿರ್ಧೆಶಕರಾದ ಆರ್ ಎನ್ ನಾಯ್ಕರ್, ಕ್ಷೇತ್ರ ಸಮೊಹ ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಪರಸನ್ನವರ, ಬಿ ಎಲ್ ಕ್ಯಾತನಗೌಡರ, ಮುಖ್ಯ ಉಪಾಧ್ಯಾಯರಾದ ಎಂ ಜಿ ತೊನಶ್ಯಾಳ, ಶ್ರೀಮತಿ ಜಿ. ಬಿ ತುಮ್ಮನಿಕಟ್ಟಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಬಿ.ಎಸ್ ದಳವಾಯಿ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಶಾಲಾ ಶಿಕ್ಷಕರು ಹಾಗೂ ಗ್ರಾಮದ ಎರಡು ಪ್ರಾಥಮಿಕ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande