ಸ್ಟೆನೋಗ್ರಾಫರ್ ಗ್ರೂಪ್ ಸಿ ಮತ್ತು ಡಿ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ, 22 ಜೂನ್ (ಹಿ.ಸ.) : ಆ್ಯಂಕರ್ : ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ.ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ
ಸ್ಟೆನೋಗ್ರಾಫರ್ ಗ್ರೂಪ್ ಸಿ ಮತ್ತು ಡಿ ಹುದ್ದೆಗೆ ಅರ್ಜಿ ಆಹ್ವಾನ


ದಾವಣಗೆರೆ, 22 ಜೂನ್ (ಹಿ.ಸ.) :

ಆ್ಯಂಕರ್ : ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ.ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಇಂಗ್ಲೀಷ್, ಹಿಂದಿ ಶೀಘ್ರಲಿಪಿ ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರೇಡ್-ಸಿ ಹುದ್ದೆಗೆ 18 ರಿಂದ 30 ವರ್ಷ, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು. ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ :080-2527342/25502520 ಅಥವಾ 080-25520653 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande