ಟೆನ್ಜಿಂಗ್ ನೊರ್ಜಿ ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, 22 ಜೂನ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯವು 2024–25ನೇ ಸಾಲಿನ ಟೆನ್ಜಿಂಗ್ ನೊರ್ಜಿ ರಾಷ್ಟ್ರೀಯ ಸಾಹಸ ಪ್ರಶಸ್ತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. 2022ರಿಂದ 2024ರೊಳಗಿನ ಜಲ, ವಾಯು ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಶಿವಮೊಗ್ಗ ಜಿಲ್ಲೆಯ
ಟೆನ್ಜಿಂಗ್ ನೊರ್ಜಿ ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನ


ಶಿವಮೊಗ್ಗ, 22 ಜೂನ್ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯವು 2024–25ನೇ ಸಾಲಿನ ಟೆನ್ಜಿಂಗ್ ನೊರ್ಜಿ ರಾಷ್ಟ್ರೀಯ ಸಾಹಸ ಪ್ರಶಸ್ತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

2022ರಿಂದ 2024ರೊಳಗಿನ ಜಲ, ವಾಯು ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು awards.gov.in ಮೂಲಕ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಟೋಲ್‌ಫ್ರೀ ನಂ. 011-23386898 ಅನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande