ದಾವಣಗೆರೆ, 22 ಜೂನ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸಂಘದ ವತಿಯಿಂದ ನಾಳೆ ಬೆಳಿಗ್ಗೆ 10.30ಕ್ಕೆ ನಗರದ ಚಗಟೇರಿ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ತೀವ್ರ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದನ್ನು ಗುರಿಯಾಗಿಸಿ ಅತಿಸಾರ ತಡಗಟ್ಟುವ ಅಭಿಯಾನ -2025 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಜಿ. ಪಂ.ಸಿಇಓ ಜಿ.ಎಂ.ವಿಠಲ ರಾವ್ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಂ.ಬಿ.ನಾಗೇಂದ್ರಪ್ಪ, ಆರ್.ಸಿ.ಹೆಚ್.ಅಧಿಕಾರಿ ಡಾ.ರೇಣುಕಾರಾಧ್ಯ, ಎಸ್ಎನ್ಸಿಯು ನೋಡಲ್ ಅಧಿಕಾರಿ ಹಾಗೂ ಮಕ್ಕಳ ತಜ್ಞ ಡಾ.ಲೋಹಿತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ ಪಿ. ಪಟಗೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa