ಮಂಡ್ಯ, 22 ಜೂನ್ (ಹಿ.ಸ.) :
ಆ್ಯಂಕರ್ : ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಬಕಾರಿ, ವಾಲ್ಮೀಕಿ ನಿಗಮದ ಬಳಿಕ ವಸತಿ ಇಲಾಖೆಯ ಭ್ರಷ್ಟಾಚಾರ ಬಯಲಿಗೆ ಬಂದಿದೆ. “ಮನೆಗಾಗಿ ಕಾಸು” ವಿಷಯ ಬಹಳ ಚರ್ಚಿತವಾಗುತ್ತಿದೆ. ಕಾಂಗ್ರೆಸ್ನವರೇ ಆದ ಶಾಸಕ ಬಿ.ಆರ್.ಪಾಟೀಲ್ ಅವರೇ ವಸತಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ವೈರಲ್ ಆಗಿರುವ ಆಡಿಯೋದಲ್ಲಿನ ಮಾತುಗಳು ತಮ್ಮದೇ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಜತೆಗೆ, ಭ್ರಷ್ಟಾಚಾರದ ತನಿಖೆಗೂ ಒತ್ತಾಯಿಸಿದ್ದಾರೆ. ಹೀಗಾಗಿ ಇದರ ಸತ್ಯಾಸತ್ಯತೆ ಹೊರಬೀಳಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ವಸತಿ ಇಲಾಖೆಯು ಉಳ್ಳವರು, ಸಾಹುಕಾರರಿಗೆ ಸೈಟ್ ಹಂಚಲು ಇರುವುದಲ್ಲ. ಬದಲಿಗೆ ಬಡವರು, ಮನೆ ಇಲ್ಲದವರು, ನಿರಾಶ್ರಿತರಿಗೆ ಸೂರು ಕೊಡುವುದು ಹೌಸಿಂಗ್ ಬೋರ್ಡ್ ಕೆಲಸ. ಹಿಂದುಳಿದವರಿಗೆ ಮನೆ ಸಿಗಬೇಕು. ಆದರೆ, ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿವೆ. ಬಡವರಿಗೆ ಮನೆಗಳನ್ನು ಕೊಡುವ ಬದಲು ಮಾರಾಟ ಮಾಡಲಾಗುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa