ಶಿವಮೊಗ್ಗ, 22 ಜೂನ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ನಗರದ ಎಂಆರ್ಎಸ್ 110/11 ಕೆವಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಜೂನ್ 24ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿಕ್ಕಲ್ಲು, ಗುರುಪುರ, ವಿದ್ಯಾನಗರ, ಶಾಂತಮ್ಮ ಲೇಔಟ್, ಬಿಹೆಚ್ ರಸ್ತೆ, ದುರ್ಗಿಗುಡಿ, ಗಾಂಧಿ ಪಾರ್ಕ್, ಬಾಪೂಜಿ ನಗರ, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಟ್ಯಾಂಕ್ ಬೌಂಡ್ ರಸ್ತೆ, ಕೋರ್ಟ್ ಕಚೇರಿ, ಆರ್ಟಿಓ ರಸ್ತೆ ಸೇರಿದಂತೆ ಹಲವು ಪ್ರದೇಶಗಳು ಪರಿಣಾಮಕ್ಕೊಳಗಾಗಲಿವೆ.
ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಉಪವಿಭಾಗ–1ರ ಸಹಾಯಕ ಕಾರ್ಯನಿರ್ವಾಹ ಎಂಜಿನಿಯರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa