ಶಾಂತಿಸಾಗರ ಪ್ರವಾಸಿ ತಾಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ
ದಾವಣಗೆರೆ, 22 ಜೂನ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರ
ಶಾಂತಿಸಾಗರ ಪ್ರವಾಸಿ ತಾಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ


ದಾವಣಗೆರೆ, 22 ಜೂನ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ.

ಪ್ರವಾಸಿಗರ ಅನುಕೂಲಕ್ಕಾಗಿ, ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ.

ಆದ್ದರಿಂದ ಪ್ರವಾಸಿ ತಾಣದ ಬೋಟಿಂಗ್ ಸ್ಥಳದಲ್ಲಿ ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್ ಹಾಗೂ ಹೊರಗಿನ ಯಾವುದೇ ತಿಂಡಿ ಮತ್ತು ಆಹಾರ ಪದಾರ್ಥಗಳನ್ನು ಬೋಟಿಂಗ್ ಸ್ಥಳದಲ್ಲಿ ಸಂಪೂರ್ಣ ನಿಷೇದಿಸಲಾಗಿದೆ.

ಒಂದು ವೇಳೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದಲ್ಲಿ ರೂ.100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಂ.ಗಂಗಾಧರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande