ರಾಯಚೂರು, 22 ಜೂನ್ (ಹಿ.ಸ.) :
ಆ್ಯಂಕರ್ : ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಕರಣ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಉದ್ಯಾನವನ ಮತ್ತು ಕಂಚಿನ ಪುತ್ಥಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆಯ ಶಂಕುಸ್ಥಾಪನೆ ಸಮಾರಂಭವು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ರಾಯಚೂರು ಆವರಣದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಉದ್ಘಾಟಿಸುವರು. ರಾಜ್ಯಸಭೆಯ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಎಂ.ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಗೌರವ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಗೃಹ ಇಲಾಖೆ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶರ, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಚೆಡ್. ಜಮೀರ್ ಅಹ್ಮದ್ ಖಾನ್, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಉನ್ನತ ಶಿಕ್ಷಣ ಇಲಾಖೆ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್, ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ, ನಗರಾಭಿವೃದ್ಧಿ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಸುರೇಶ ಬಿ. ಎಸ್., ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಉಪಸ್ಥಿತರಿರುವರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜಿ.ಟಿ.ಪಾಟೀಲ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ.ಅಜಯ್ ಧರ್ಮಸಿಂಗ್ ಅವರು ಗೌರವಾನ್ವಿತ ಉಪಸ್ಥಿತಿ ವಹಿಸುವರು.
ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಅವರು ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತಿ ವಹಿಸುವರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ್, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ಯಾದಗಿರಿ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ ತನ್ನೂರ, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ಗುರುಮಿಠಕಲ್ ಶಾಸಕರಾದ ಶರಣಗೌಡ ಕಂದಕೂರ, ಶೋರಾಪೂರ ಶಾಸಕರಾದ ರಾಜಾ ವೇಣುಗೋಪಾಲ್ ನಾಯಕ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ. ನಮೋಷಿ, ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ್, ಶರಣಗೌಡ ಅ. ಪಾಟೀಲ್ ಬಯ್ಯಾಪೂರ, ಎ. ವಸಂತಕುಮಾರ, ಬಸನಗೌಡ ಬಾದರ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ರಾಯಚೂರು ತಾಲ್ಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಯರಗೇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಹಾದೇವಿ ಗಂ. ಭೀಮೇಶ ನಾಯಕ್ ಅವರು ಗೌರವಾನ್ವಿತ ಆಹ್ವಾನಿತರಾಗಿ ಉಪಸ್ಥಿತಿ ವಹಿಸುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್