ಇರಾನ್ ಮೇಲೆ ಅಮೆರಿಕ ಸೇನೆ ದಾಳಿ
ವಾಷಿಂಗ್ಟನ್, 22 ಜೂನ್ (ಹಿ.ಸ.) : ಆ್ಯಂಕರ್ : ಇರಾನ್‌ನಲ್ಲಿರುವ ಮೂರು ಪರಮಾಣು ಸ್ಥಾವರಗಳ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಭಯಾನಕ ಸಂಘರ್ಷದ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಇದರೊಂದಿಗೆ, ಇರಾನ್
Trump


ವಾಷಿಂಗ್ಟನ್, 22 ಜೂನ್ (ಹಿ.ಸ.) :

ಆ್ಯಂಕರ್ : ಇರಾನ್‌ನಲ್ಲಿರುವ ಮೂರು ಪರಮಾಣು ಸ್ಥಾವರಗಳ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಭಯಾನಕ ಸಂಘರ್ಷದ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಇದರೊಂದಿಗೆ, ಇರಾನ್ ಜೊತೆಗಿನ ಯುದ್ಧದಲ್ಲಿ ಅಮೆರಿಕ ಅಧಿಕೃತ ಪ್ರವೇಶ ಮಾಡಿದಂತಾಗಿದೆ.

ಸಾಮಾಜಿಕ ಜಾಲತಾಣ 'ಟ್ರೂತ್'ನಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್, 'ಅಮೆರಿಕ ಇರಾನ್‌ನ 3 ಪ್ರಮುಖ ಪರಮಾಣು ಸ್ಥಾವರಗಳಾದ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಅನ್ನು ಯಶಸ್ವಿಯಾಗಿ ನಾಶಪಡಿಸಿದೆ. ಈಗ ನಮ್ಮೆಲ್ಲ ವಿಮಾನಗಳು ಇರಾನ್ ವಾಯುಪ್ರದೇಶದ ಹೊರಬಂದಿದ್ದು, ಸುರಕ್ಷಿತವಾಗಿ ಮರಳುತ್ತಿವೆ' ಎಂದು ತಿಳಿಸಿದ್ದಾರೆ.

'ನಮ್ಮ ಶ್ರೇಷ್ಠ ಯೋಧರಿಗೆ ಅಭಿನಂದನೆಗಳು. ಜಗತ್ತಿನಲ್ಲಿ ಬೇರಾವುದೇ ಸೇನೆ ಇದನ್ನು ಮಾಡಲು ಸಾಧ್ಯವಿಲ್ಲ. ಈಗ ಶಾಂತಿಯ ಸಮಯ ಬಂದಿದೆ' ಎಂದು ಅವರು ಬರೆದುಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande