ಬಾಗಲಕೋಟೆ, 23 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಗ್ನಿಶಾಮಕ ಠಾಣೆಯ ಕಟ್ಟಡವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಚಿವರು,ಆಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ ಅಗತ್ಯ ಉಪಕರಣ ಮತ್ತು ವಾಹನಗಳನ್ನು ಇಲಾಖೆಗೆ ನೀಡಲಾಗುವುದು. ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿ ನೇಮಕಾತಿ ಕುರಿತ ಪ್ರಸ್ತಾವನೆ ಸರ್ಕಾರದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದ 219 ತಾಲ್ಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳಿವೆ. ಇನ್ನುಳಿದ 19 ತಾಲ್ಲೂಕುಗಳಲ್ಲಿಯೂ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಒಳ್ಳೆಯ ಹೆಸರಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa