ಅನುಪಮಾ ಧಾರಾವಾಹಿ ಚಿತ್ರಿಕರಣ ಘಟಕಕ್ಕೆ ಬೆಂಕಿ
ಮುಂಬಯಿ, 23 ಜೂನ್ (ಹಿ.ಸ.) : ಆ್ಯಂಕರ್ : ಜನಪ್ರಿಯ ಟಿವಿ ಧಾರಾವಾಹಿ ‘ಅನುಪಮಾ’ ಚಿತ್ರಿಕರಣ ಘಟಕಕ್ಕೆ ಸೋಮವಾರ ಮುಂಜಾನೆ ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಭಾರಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಸಂಭವಿಸಿದ ಬೆಂಕಿಯಿಂದ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅಗ್ನಿಶ
Fire


ಮುಂಬಯಿ, 23 ಜೂನ್ (ಹಿ.ಸ.) :

ಆ್ಯಂಕರ್ : ಜನಪ್ರಿಯ ಟಿವಿ ಧಾರಾವಾಹಿ ‘ಅನುಪಮಾ’ ಚಿತ್ರಿಕರಣ ಘಟಕಕ್ಕೆ ಸೋಮವಾರ ಮುಂಜಾನೆ ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಭಾರಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಸಂಭವಿಸಿದ ಬೆಂಕಿಯಿಂದ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರೂ, ಕೋಟ್ಯಂತರ ರೂಪಾಯಿಗಳ ನಷ್ಟ ಉಂಟಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಈ ಬೆನ್ನಲ್ಲೇ, ಅಖಿಲ ಭಾರತ ಚಲನಚಿತ್ರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಶ್ಯಾಮ್‌ಲಾಲ್ ಗುಪ್ತಾ ಮುಖ್ಯಮಂತ್ರಿಗೆ ಪತ್ರ ಬರೆದು , ಅಗ್ನಿ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ ಫಿಲ್ಮ್ ಸಿಟಿ ವ್ಯವಸ್ಥಾಪಕರು ಹಾಗೂ ಮುಂಬೈ ಕಾರ್ಮಿಕ ಆಯುಕ್ತರನ್ನು ತಕ್ಷಣ ಅಮಾನತುಗೊಳಿಸಬೇಕು ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಿ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande