ಬೆಳಗಾವಿ, 23 ಜೂನ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದ ಪರಿಣಾಮ, ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ಸಂಭವಿಸಿದೆ. ಇದರ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 7 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ.
ದೂದಗಂಗಾ ನದಿಯ ಮಲ್ಲಿಕವಾಡ-ದತ್ತವಾಡ ಹಾಗೂ ಭೋಜ-ಕಾರದಗಾ ಸಂಪರ್ಕ ಸೇತುವೆಗಳು ಮುಳುಗಡೆಯಾಗಿದ್ದರೆ,
ವೇದಗಂಗಾ ನದಿಯಲ್ಲಿ ಭಾರವಾಡ-ಕುನ್ನೂರು, ಭೋಜವಾಡಿ-ಕುನ್ನೂರು, ಅಕ್ಕೋಳ-ಸಿದ್ನಾಳ ಸೇತುವೆಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಕೃಷ್ಣಾ ನದಿಯ ಮೇಲೆ ಯಡೂರು-ಕಲ್ಲೋಳ ಮತ್ತು ಭಾವನಸೌಂದತ್ತಿ-ಮಾಂಜರಿ ಸಂಪರ್ಕ ಸೇತುವೆಗಳೂ ಜಲಾವೃತಗೊಂಡಿವೆ.
ಜನತೆ ಪರ್ಯಾಯ ಮಾರ್ಗಗಳ ಮೂಲಕ ಸಂಚಾರ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa