ಗಾಂಧಿನಗರ, 23 ಜೂನ್ (ಹಿ.ಸ.) :
ಆ್ಯಂಕರ್ : ಗುಜರಾತ್ನ ವಿಸಾವದರ್ ಹಾಗೂ ಕಾಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಎರಡು ಕ್ಷೇತ್ರಗಳಲ್ಲಿ ಭಿನ್ನಪಕ್ಷಗಳ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಕಾಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಂದ್ರಕುಮಾರ್ (ರಾಜುಭಾಯಿ) ಚಾವ್ಡಾ 49,288 ಮತಗಳೊಂದಿಗೆ ಮುನ್ನಡೆಯಲ್ಲಿದ್ದು, ಅವರು ಕಾಂಗ್ರೆಸ್ ಅಭ್ಯರ್ಥಿ ರಮೇಶ್ಭಾಯಿ ಚಾವ್ಡಾ ವಿರುದ್ಧ 21,021 ಮತಗಳ ಅಂತರ ಹೊಂದಿದ್ದಾರೆ.
ವಿಸಾವದರ್ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಗೋಪಾಲ್ ಇಟಾಲಿಯಾ 38,710 ಮತಗಳೊಂದಿಗೆ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಕಿರಿತ್ ಪಟೇಲ್ 33,052 ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ, ಕಾಂಗ್ರೆಸ್ನ ನಿತಿನ್ ರಣಪರಿಯಾ 3,750 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನೂ ಕೆಲ ಸುತ್ತಿನ ಎಣಿಕೆ ಬಾಕಿ ಇದ್ದು, ಅಂತಿಮ ಫಲಿತಾಂಶ ಇನ್ನಷ್ಟೇ ಪ್ರಕಟವಾಗಬೇಕಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa