ಬೆಂಗಳೂರು, 23 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಿದ್ದು, ಜೂನ್ 26ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಗದಗ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa