ಖೇಲೋ ಇಂಡಿಯಾ ಸೈಕ್ಲಿಂಗ್ ಗೆ, ಅರ್ಜಿ ಆಹ್ವಾನ
ಗದಗ, 24 ಜೂನ್ (ಹಿ.ಸ.) : ಆ್ಯಂಕರ್ : 2024-25ನೇ ಸಾಲಿನಲ್ಲಿ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಸೈಕ್ಲಿಂಗ್ ಕೇಂದ್ರ ತೆರೆಯಲು ಮಾನ್ಯ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಜಿಲ್ಲಾ ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಸೈಕ್ಲಿಂಗ್ ತರಬೇತುದಾರರ ಹುದ
ಪೋಟೋ


ಗದಗ, 24 ಜೂನ್ (ಹಿ.ಸ.) :

ಆ್ಯಂಕರ್ : 2024-25ನೇ ಸಾಲಿನಲ್ಲಿ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಸೈಕ್ಲಿಂಗ್ ಕೇಂದ್ರ ತೆರೆಯಲು ಮಾನ್ಯ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಜಿಲ್ಲಾ ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಸೈಕ್ಲಿಂಗ್ ತರಬೇತುದಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖೇಲೋ ಇಂಡಿಯಾ ಸೈಕ್ಲಿಂಗ್ ಕೇಂದ್ರಕ್ಕೆ ಒಬ್ಬ ತರಬೇತುದಾರರ ಅವಶ್ಯಕತೆ ಇದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಸಮಿತಿಯು ತರಬೇತುದಾರರನ್ನು ಆಯ್ಕೆ ಮಾಡಲಿದ್ದು, ಸದರಿ ತರಬೇತುದಾರರು ಅಂತರರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ವಿಜೇತರಾದವರಿಗೆ ಹಾಗೂ ಗದಗ ಜಿಲ್ಲೆಯವರಿಗೆ ಆಧ್ಯತೆ ನೀಡಲಾಗುವುದು.

ಖೇಲೋ ಇಂಡಿಯಾ ತರಬೇತುದಾರರ ಹುದ್ದೆಗೆ ಈ ಕೆಳಕಂಡ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೈಕ್ಲಿಂಗ್ ಕ್ರೀಡೆಯಲ್ಲಿ ಮಾಡಿದವರಿಗೆ ಹಾಗೂ ಗದಗ ರಹವಾಸಿಗಳಿಗೆ ಪ್ರಥಮ ಆಧ್ಯತೆ ನೀಡಲಾಗುವುದು.

ಜಿಲ್ಲಾ ಮಟ್ಟದ ಸಮಿತಿಯಿಂದ ನಡೆಸಲಾದ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ದಾಖಲೆಗಳನ್ನು ಪರಿಶೀಲಿಸಿ, ಒಂದು ವರ್ಷದ ಅವಧಿಗೆ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಹ ಅಭ್ಯರ್ಥಿಗಳು ದಿ:02-07-2025ರ ಒಳಗಾಗಿ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ಇಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ದೂರವಾಣಿ ಸಂಖ್ಯೆ 08372-238345 ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಖುದ್ದಾಗಿ ಸಲ್ಲಿಸಲು ಪ್ರಕಟಣೆ ಮೂಲಕ ತಿಳಿಸಲಾಗಿದೆ. ಸಹಾಯಕ ನಿರ್ದೇಶಕರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande