ಟಣಕನಕಲ್ ಆದರ್ಶ ವಿದ್ಯಾಲಯ : ಉಳಿಕೆ ಸೀಟುಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 24 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ಟಣಕನಕಲ್‌ನ ಸರಕಾರಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ 7, 8 ಹಾಗೂ 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಾಲೆಯ 7ನೇ ತರಗತಿಯಲ್ಲಿ 10 ಸೀಟುಗಳು, 8ನೇ ತರ
ಟಣಕನಕಲ್ ಆದರ್ಶ ವಿದ್ಯಾಲಯ : ಉಳಿಕೆ ಸೀಟುಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 24 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ಟಣಕನಕಲ್‌ನ ಸರಕಾರಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ 7, 8 ಹಾಗೂ 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಶಾಲೆಯ 7ನೇ ತರಗತಿಯಲ್ಲಿ 10 ಸೀಟುಗಳು, 8ನೇ ತರಗತಿಯಲ್ಲಿ 14 ಸೀಟುಗಳು ಹಾಗೂ 9ನೇ ತರಗತಿಯಲ್ಲಿ 12 ಸೀಟುಗಳು ಖಾಲಿ ಇರುತ್ತವೆ. ಖಾಲಿ ಇರುವ ಸೀಟುಗಳನ್ನು ಸಂಬ0ಧಿಸಿದ ಖಾಲಿ ಸೀಟಿನ ಮೀಸಲಾತಿಯನ್ವಯ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಬೇಕಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಪರೀಕ್ಷೆಯು ವಸ್ತುನಿಷ್ಠ ಮಾದರಿಯ 100 ಅಂಕಗಳಿಗೆ ನಡೆಯುತ್ತದೆ. ಅರ್ಜಿಗಳನ್ನು ಶಾಲೆಯಿಂದ ಪಡೆದು ಭರ್ತಿ ಮಾಡಿ ಜುಲೈ 07 ರೊಳಗೆ ಸಲ್ಲಿಸಬೇಕು. ಜುಲೈ 13 ರಂದು ಬೆಳಿಗ್ಗೆ 11 ಗಂಟೆಯಿ0ದ ಮಧ್ಯಾಹ್ನ 01 ಗಂಟೆಯವರೆಗೆ ಕೊಪ್ಪಳದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌ.ಶಾ. ವಿಭಾಗ) ಪ್ರವೇಶ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರು, ಸರಕಾರಿ ಆದರ್ಶ ವಿದ್ಯಾಲಯ ಟಣಕನಕಲ್, ದೂ.ಸಂ. 9901130717, 9916703201 ಗೆ ಸಂಪರ್ಕಿಸಬಹುದು ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande