ಹೊಸಪೇಟೆ, 24 ಜೂನ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಪಿ ರಾಜ್ಯ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಪ್ರವೇಶಾತಿ ಶುಲ್ಕ ಮರುಪಾವತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡಪ್ಪ ಜಿಗಳಿಕೊಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ವ್ಯಾಪ್ತಿಗೆ ಬರುವ ಪಿಯುಸಿ, ಡಿಪ್ಲೋಮಾ, ಪದವಿ, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಪಿ ಆನ್ ಲೈನ್https://ssp.postmatric.karnataka.gov.in ಪೋರ್ಟಲ್ ಮೂಲಕ ಸೆ.30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಳೆದ ಸೆಮಿಸ್ಟರ್‍ನ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕ ಪಡೆದಿರಬೇಕು, ಪೆÇೀಷಕರ ವಾರ್ಷಿಕ ಆದಾಯ ರೂ.2 ಲಕ್ಷ ಮೀರಿರಬಾರದು. ಯೋಜನೆಯ ಪ್ರಯೋಜನ ಪಡೆಯುವ ವಿದ್ಯಾರ್ಥಿಗಳು ಬ್ಯಾಂಕ್ ಖಾತೆ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ http://dom.karnataka.gov.in ವೆಬ್‍ಸೈಟ್‍ನ್ನು ವೀಕ್ಷಿಸಬಹುದು, ದೂ.8277799990, 8050435366, 9980237242, 7353696984, 849492781 ಸಂಖ್ಯೆಗೆ ಕರೆ ಮಾಡಬಹುದು ಅಥವಾ ಜಿಲ್ಲಾ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್