ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ
ಹೊಸಪೇಟೆ, 24 ಜೂನ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನಲ್ಲಿ ಐಐಟಿ, ಐಐಐಟಿ ಸೇರಿದಂತೆ ವಿವಿಧ ಕೋರ್ಸ್‍ಗಳಿಗೆ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡ
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ


ಹೊಸಪೇಟೆ, 24 ಜೂನ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನಲ್ಲಿ ಐಐಟಿ, ಐಐಐಟಿ ಸೇರಿದಂತೆ ವಿವಿಧ ಕೋರ್ಸ್‍ಗಳಿಗೆ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡಪ್ಪ ಜಿಗಳಿಕೊಪ್ಪ ಅವರು ತಿಳಿಸಿದ್ದಾರೆ.

ಐಐಟಿ, ಐಐಐಟಿ, ಐಐಎಂ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ ಮತ್ತು ಐಯುಎಸ್‍ಎಲ್‍ಎ ಮುಂತಾದ ಪ್ರತಿಷ್ಠಿತ ಸಂಸ್ಥೆ ಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್. ಪಾರ್ಸಿ) ವಿದ್ಯಾರ್ಥಿಗಳಿಗೆ ಕೋರ್ಸ್‍ನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪೆÇೀತ್ಸಾಹಧನ ನೀಡಲು https://sevasindhu.karnataka.gov.in/sevasindhu/departmentservices,

ವೆಬ್ ಸೈಟ್ ಮೂಲಕ ಸೆ.30 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ http://dom.karnataka.gov.in ಅನ್ನು ವೀಕ್ಷಿಸಿ ಅಥವಾ ಹತ್ತಿರದ ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande