ಪ್ರಧಾನ ಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ
ಹೊಸಪೇಟೆ, 24 ಜೂನ್ (ಹಿ.ಸ.) : ಆ್ಯಂಕರ್ : ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ) 2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಾಧಿಕಾರಿಗಳಾದ ಡಿ.ಬಿ.ಈರಣ್ಣ ತಿಳಿಸಿದ್ದಾರೆ. ಸ
ಪ್ರಧಾನ ಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ


ಹೊಸಪೇಟೆ, 24 ಜೂನ್ (ಹಿ.ಸ.) :

ಆ್ಯಂಕರ್ : ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ) 2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಾಧಿಕಾರಿಗಳಾದ ಡಿ.ಬಿ.ಈರಣ್ಣ ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರು, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿಎಂ ಸ್ವನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೈಗಾರಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು https://pmay-urban.gov.in ವೆಬ್‍ಸೈಟ್ ನಲ್ಲಿ ಸ್ವತಃ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇದೇ ಜುಲೈ.15 ರೊಳಗಾಗಿ ಸಲ್ಲಿಸಿದ ದಾಖಲಾತಿಗಳನ್ನು ಪುರಸಭೆ ಕಾರ್ಯಾಲಯಕ್ಕೆ ಕಡ್ಡಾಯವಾಗಿ ನೀಡತಕ್ಕದ್ದು, ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಆಶ್ರಯ ಶಾಖೆಯ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande