ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ
ಗದಗ, 24 ಜೂನ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನ
ಪೋಟೋ


ಗದಗ, 24 ಜೂನ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದೆ.

ಸದರಿ ಅನುದಾನದಲ್ಲಿ ರೂ.10000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90000/- ಗಳನ್ನು ಶಾಲೆಯ ಎಸ್.ಡಿ.ಎಂ.ಸಿ. ಗೆ ಅಗತ್ಯ ಕ್ರೀಡಾ ಸಾಮಗ್ರಿಗಳನ್ನು ಖರೀದಿ ಮಾಡಲು ಉಲ್ಲೇಖಿತ ಪತ್ರದನ್ವಯ ಸೂಚಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ 2024-25 ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಸರ್ಕಾರಿ ಶಾಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಸರ್ಕಾರಿ ಶಾಲೆಗಳು ದಿ:25-06-

2025 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ಇಲ್ಲಿ ಲಿಖಿತವಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ದೂರವಾಣಿ ಸಂಖ್ಯೆ 08372-238345 ಗೆ ಸಂಪರ್ಕಿಸಲು ಕೋರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande