ಹಾವೇರಿಯಲ್ಲಿ ಗುತ್ತಿಗೆದಾರನ ಹತ್ಯೆ
ಹಾವೇರಿ, 24 ಜೂನ್ (ಹಿ.ಸ.) : ಆ್ಯಂಕರ್ : ಪ್ರಥಮ ದರ್ಜೆಯ ಗುತ್ತಿಗೆದಾರರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. 40 ವರ್ಷದ ಶಿವಾನಂದ ಕುನ್ನೂರು ಕೊಲೆಯಾದ ಗುತ್ತಿಗೆದಾರನಾಗಿದ್ದು, ಶಿಗ್ಗಾಂವ್​ ಪಟ್ಟಣದ ಹೊರವಲಯದ ಗಂ
Murder


ಹಾವೇರಿ, 24 ಜೂನ್ (ಹಿ.ಸ.) :

ಆ್ಯಂಕರ್ : ಪ್ರಥಮ ದರ್ಜೆಯ ಗುತ್ತಿಗೆದಾರರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

40 ವರ್ಷದ ಶಿವಾನಂದ ಕುನ್ನೂರು ಕೊಲೆಯಾದ ಗುತ್ತಿಗೆದಾರನಾಗಿದ್ದು, ಶಿಗ್ಗಾಂವ್​ ಪಟ್ಟಣದ ಹೊರವಲಯದ ಗಂಗಿಭಾವಿ ಕ್ರಾಸ್ ಬಳಿ ಶಿವಾನಂದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೈಗೈದಿದ್ದಾರೆ.

ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು. ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂದು ಶಿವಾನಂದ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶಿಗ್ಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande