ನಾಳೆ ಪರಿಸರ ದಿನಾಚರಣೆ, ಪರಿಸರ ಜಾಥಾ
ರಾಯಚೂರು, 24 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕನ್ನಡ ಭವನದಲ್ಲಿ ನಾಳೆ ಬೆ
ನಾಳೆ ಪರಿಸರ ದಿನಾಚರಣೆ, ಪರಿಸರ ಜಾಥಾ


ರಾಯಚೂರು, 24 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕನ್ನಡ ಭವನದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ವಿಶ್ವ ಪರಿಸರ ದಿನಾಚರಣೆ-2025ರ ಅಂಗವಾಗಿ ಪರಿಸರ ಜಾಥಾ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪರಿಸರ ಜಾಥಾ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ದಿವಾಣಿ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹನುಮಂತ ಅನಂತರಾವ್ ಸ್ವಾತಿಕ್ ಅವರು ಉದ್ಘಾಟಿಸುವರು.

ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಾಪಾತ್ರ, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಎಸ್., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ್ ಅವರು ಅಧ್ಯಕ್ಷತೆ ವಹಿಸುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಆರ್.ಹೆಚ್.ಸಾಗರ್, ಪರಿಸರ ಅಧಿಕಾರಿ ಈ ಪ್ರಕಾಶ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande