ರಾಜ್ಯದಲ್ಲಿ ಜೂನ್ ೩೦ರ ವರೆಗೆ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು, 24 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕುಗೊಂಡಿದ್ದು‌ ಜೂನ್ ೩೦ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಆರಂಭವಾದಾಗಿನಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಳೆಯಾಗಿದ್ದು ಬಿಟ್ಟರೆ ಬೇರೆ ಭಾಗದಲ್ಲಿ ಮಳೆಯಾಗಿ
ರಾಜ್ಯದಲ್ಲಿ ಜೂನ್ ೩೦ರ ವರೆಗೆ ಭಾರಿ ಮಳೆ ಎಚ್ಚರಿಕೆ


ಬೆಂಗಳೂರು, 24 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕುಗೊಂಡಿದ್ದು‌ ಜೂನ್ ೩೦ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಆರಂಭವಾದಾಗಿನಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಳೆಯಾಗಿದ್ದು ಬಿಟ್ಟರೆ ಬೇರೆ ಭಾಗದಲ್ಲಿ ಮಳೆಯಾಗಿರಲಿಲ್ಲ. ಈಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande