ರಾಯಚೂರು, 24 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದಿಂದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಣೆ ಸಂಬಂಧ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಸಮುದಾಯದ ಮುಖಂಡರು, ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು.
ಇದೆ ವೇಳೆ ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ನಾಡಿನ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಕೆಂಪೇಗೌಡ ಅವರ ಪರಿಶ್ರಮದಿಂದ ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಗಳಿಸಿದೆ. ಸರ್ಕಾರದ ನಿರ್ದೇಶನದಂತೆ ಕೆಂಪೇಗೌಡ ಅವರ ಜೀವನ ಸಾಧನೆಗಳನ್ನು ಸ್ಮರಿಸುವ ಸಲುವಾಗಿ ಇದೇ ತಿಂಗಳ 27 ರಂದು ನಗರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜೂ.27ರಂದು ನಗರದ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಅಂದು ರಂಗಮಂದಿರದ ಆವರಣದಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಏರ್ಪಾಡು ಮಾಡಬೇಕು. ನಗರದ ಮುಖ್ಯ ರಸ್ತೆಗಳು ಮತ್ತು ಆವರಣದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮ ಯಶಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಇಲಾಖಾವಾರು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಶಾಲಾ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿಜೇತರಿಗೆ ಪ್ರಶಸ್ತಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಸಮಾಜ ಮುಖಂಡರು ಮಾತನಾಡಿ, ವೇದಿಕೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು ಎಂದು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಕೆಂಪೇಗೌಡರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಇದೆ ವೇಳೆ ಸಮಾಜದ ಬಂಧುಗಳು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಟಿ.ತಿರುಮಲ, ರಾಯಚೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಇಸ್ಮಾಯಿಲ್ ಸೇರಿದಂತೆ ಸಮಾಜ ಮುಖಂಡರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್