ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ದಾಖಲಿಸಲು ಸೂಚನೆ
ಕೊಪ್ಪಳ, 24 ಜೂನ್ (ಹಿ.ಸ.) : ಆ್ಯಂಕರ್ : ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಜೂನ್ 23 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ತ
ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ದಾಖಲಿಸಲು ಸೂಚನೆ


ಕೊಪ್ಪಳ, 24 ಜೂನ್ (ಹಿ.ಸ.) :

ಆ್ಯಂಕರ್ : ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಜೂನ್ 23 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆ್ಯಪ್‌ನಲ್ಲಿ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾ0ಶದ ಮೂಲಕ ದಾಖಲಿಸಬಹುದಾಗಿದೆ.

ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ Crop Survey Kharif 2025 ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬಹುದಾಗಿದೆ. ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ದಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್‌ಟಿಸಿಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತಿದ್ದು, ನನ್ನ ಬೆಳೆ ನನ್ನ ಹಕ್ಕು ಅಡಿ ಜಿಲ್ಲೆಯಲ್ಲಿ 4,34,326 ಬೆಳೆ ತಾಕುಗಳಿದ್ದು, ಈ ತಾಕುಗಳಿಗೆ ರೈತರು ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು. ರೈತರು ಸ್ವತಃ ತಾವೇ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ತಾವು ಬೆಳೆದ ಬೆಳೆಗಳ ಮಾಹಿತಿ ನಿಖರವಾಗಿ ನೀಡುವುದರಿಂದ ಮುಂಬರುವ ವ್ಯತ್ಯಾಸವನ್ನು ತಡೆಯಬಹುದಾಗಿದೆ.

ಕಳೆದ ವರ್ಷದಿಂದ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ತಪ್ಪು ಮಾಹಿತಿಯನ್ನು ಅಪ್‌ಲೋಡ್ ಮಾಡುವುದನ್ನು ತಪ್ಪಿಸಲು ಎಐ (AI) ಟೂಲ್ ಅನ್ನು ಸೇರಿಸಲಾಗಿದೆ. ರೈತರು ಬೆಳೆ ಸಮೀಕ್ಷೆ ಕೈಗೊಳ್ಳಲು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಪಿ.ಆರ್ ಗಳನ್ನು / ಕೃಷಿ / ತೋಟಗಾರಿಕೆ / ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande