ಬೆಂಗಳೂರು, 24 ಜೂನ್ (ಹಿ.ಸ.) :
ಆ್ಯಂಕರ್ : ಎಂಎಸ್ಐಎಲ್ ಮೂಲಕ ವಿಶೇಷ ಚಿಟ್ ಫಂಡ್ ಯೋಜನೆಯನ್ನು ಬೃಹತ್ ಪ್ರಮಾಣದಲ್ಲಿ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಇಂದು ಈ ವಿನೂತನ ಯೋಜನೆಯ ಪ್ರಾತ್ಯಕ್ಷಿಕೆ ಮತ್ತು ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಸರ್ಕಾರದ ಬೆಂಬಲವಿರುವ ಎಂಎಸ್ಐಎಲ್ ಚಿಟ್ ಫಂಡ್ ಸಂಪೂರ್ಣವಾಗಿ ಸುರಕ್ಷಿತ ಹಾಗೂ ವಿಶ್ವಾಸಾರ್ಹವಾಗಿದ್ದು, ಉಳಿತಾಯಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಂಕಷ್ಟದ ಸಮಯದಲ್ಲಿ ಆರ್ಥಿಕ ಬಲವನ್ನೂ ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa