ನವದೆಹಲಿ, 24 ಜೂನ್ (ಹಿ.ಸ.) :
ಆ್ಯಂಕರ್ : ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪೂರ್ವ, ಮಧ್ಯ ಮತ್ತು ಈಶಾನ್ಯ ಭಾರತದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಧ್ಯ ಪ್ರದೇಶ, ಛತ್ತೀಸ್ಗಢ, ಒಡಿಶಾ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದ ವಿದರ್ಭ ಮತ್ತು ಸಿಕ್ಕಿಂ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇದರಿಂದಾಗಿ ಗುಡುಗು ಸಹಿತ ಮಳೆ, ಭೂಕುಸಿತ, ಪ್ರವಾಹದಂತಹ ಅಪಾಯಗಳು ಉಂಟಾಗುವ ಸಾಧ್ಯತೆ ಇದೆ.
ಪಶ್ಚಿಮ ಭಾರತದಲ್ಲಿ ಗುಜರಾತ್, ಕೊಂಕಣ-ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡದಲ್ಲಿ ಜೂನ್ 29ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಇವೆರಡೂ ಪ್ರದೇಶಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಜಮ್ಮು-ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಪೂರ್ವ-ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa