ವಸತಿ ಶಾಲೆಗಳ ಪ್ರವೇಶಕ್ಕೆ ಜೂನ್ 26 ರಂದು ಎರಡನೇ ಕೌನ್ಸೆಲಿಂಗ್
ರಾಯಚೂರು, 24 ಜೂನ್ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಸಂಬಂಧಿಸಿದ ಜೂನ್ 26 ರಂದು 2ನೇ ಆಯ್ಕೆಪಟ್ಟಿಯ ಕೌನ್ಸಲಿಂಗ್‍ಗೆ ಅರ್ಹ ಅಭ್ಯರ್ಥಿಗಳು ಹಾ
ವಸತಿ ಶಾಲೆಗಳ ಪ್ರವೇಶಕ್ಕೆ ಜೂನ್ 26 ರಂದು ಎರಡನೇ ಕೌನ್ಸೆಲಿಂಗ್


ರಾಯಚೂರು, 24 ಜೂನ್ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಸಂಬಂಧಿಸಿದ ಜೂನ್ 26 ರಂದು 2ನೇ ಆಯ್ಕೆಪಟ್ಟಿಯ ಕೌನ್ಸಲಿಂಗ್‍ಗೆ ಅರ್ಹ ಅಭ್ಯರ್ಥಿಗಳು ಹಾಜರಾಗುವಂತೆ ಕೋರಲಾಗಿದೆ.

ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರಾಯಚೂರು, ಗಿಲ್ಲೇಸೂಗೂರು, ಮಾನವಿ, ಸಿಂಧನೂರು, ಲಿಂಗಸೂಗೂರು ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯರಮರಸ್ ಕ್ಯಾಂಪ್ ವಸತಿ ಶಾಲೆ ಮತ್ತು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ ರಾಯಚೂರು ಇಲ್ಲಿಗೆ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ.75 ರಷ್ಟು ಸ್ಥಾನಗಳನ್ನು (ಮುಸ್ಲಿಂ ಶೇ.77, ಕ್ರಿಶ್ಚಿಯನ್ ಶೇ.14, ಜೈನ್ ಶೇ.7, ಸಿಖ್ ಶೇ.2, ಭೌದ್ದ ಶೇ.2) ಶೇ.25ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಮೀಸಲಿರಿಸಿ ಏಪ್ರಿಲ್ 27 ರಂದು ಪ್ರವೇಶ ಪರೀಕ್ಷೆ ನಡೆಸಿದ್ದು, ಮೇ.27 ರಂದು ಪ್ರವೇಶ ಪರೀಕ್ಷೆಯ ಫಲಿತಾಂಶ ಮತ್ತು ತಾತ್ಕಾಲಿಕಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜೂನ್ 26ರ ಬೆಳಿಗ್ಗೆ 9.30ಕ್ಕೆ ಅಲ್ಪಸಂಖ್ಯಾತ ವರ್ಗದ ಬಾಲಕ, ಬಾಲಕಿಯರ ಹಾಗೂ ಇತರೆ ವರ್ಗದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿಗಳಿಗೆ 2ನೇ ಆಯ್ಕೆಪಟ್ಟಿಯ ಕೌನ್ಸಲಿಂಗ್‍ನ್ನು ಏರ್ಪಡಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ, ವಿದ್ಯಾರ್ಥಿಯ 5 ನೇ ತರಗತಿ ಅಂಕಪಟ್ಟಿ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿಶೇಷ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಸಂಬಂಧಿಸಿದ ಪ್ರಮಾಣ ಪತ್ರದೊಂದಿಗೆ ಹಾಜರಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande