ತುಮಕೂರು, 24 ಜೂನ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನವೀಕೃತ ಸಭಾಂಗಣವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು. ಬಳಿಕ 2024-25ನೇ ಸಾಲಿನ ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್ಗೌಡ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್ಬಾಬು, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa