ಯರಮರಸ್ ಆದರ್ಶ ಶಾಲೆಯಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು, 25 ಜೂನ್ (ಹಿ.ಸ.) : ಆ್ಯಂಕರ್ : ನಗರದ ಯರಮರಸ್‍ನಲ್ಲಿರುವ ಆದರ್ಶ ವಿದ್ಯಾಲಯ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜುಲೈ 1 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಆದರ್ಶ ವಿದ್ಯಾಲಯದ ಮುಖ್ಯಾಧ್ಯಾಪಕರಾದ ಮಂಜುನಾಥ ಅವರು ತಿಳಿಸಿದ
ಯರಮರಸ್ ಆದರ್ಶ ಶಾಲೆಯಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ


ರಾಯಚೂರು, 25 ಜೂನ್ (ಹಿ.ಸ.) :

ಆ್ಯಂಕರ್ : ನಗರದ ಯರಮರಸ್‍ನಲ್ಲಿರುವ ಆದರ್ಶ ವಿದ್ಯಾಲಯ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜುಲೈ 1 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಆದರ್ಶ ವಿದ್ಯಾಲಯದ ಮುಖ್ಯಾಧ್ಯಾಪಕರಾದ ಮಂಜುನಾಥ ಅವರು ತಿಳಿಸಿದ್ದಾರೆ.

2025-26ನೇ ಸಾಲಿನಲ್ಲಿ ಶಾಲೆಯಲ್ಲಿ ಖಾಲಿ ಇರುವ 7, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಉಳಿಕೆ ಸೀಟುಗಳಿಗೆ ಪ್ರವೇಶ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಿದ್ದು, ಜುಲೈ 6 ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿಗಳು ಆದರ್ಶ ವಿದ್ಯಾಲಯದಲ್ಲಿ ಲಭ್ಯವಿದ್ದು, ಖುದ್ದಾಗಿ ಪಡೆದು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

ಮೀಸಲಾತಿ ಅನ್ವಯ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9743304420, 7406000035 ಗೆ ಸಂಪರ್ಕಿಸಬಹುದಾಗಿದೆ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande