ಶ್ರೇಷ್ಠ ಕೃಷಿಕ ಮತ್ತು ಕೃಷಿ ಪಂಡಿತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, 25 ಜೂನ್ (ಹಿ.ಸ.) : ಆ್ಯಂಕರ್ : ಆತ್ಮ ಯೋಜನೆಯಡಿ 2025-26ನೇ ಸಾಲಿನ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ನಾನಾ ಕೃಷಿ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆಗೈದಿರುವ ರೈತ/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾ
ಶ್ರೇಷ್ಠ ಕೃಷಿಕ ಮತ್ತು ಕೃಷಿ ಪಂಡಿತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, 25 ಜೂನ್ (ಹಿ.ಸ.) :

ಆ್ಯಂಕರ್ : ಆತ್ಮ ಯೋಜನೆಯಡಿ 2025-26ನೇ ಸಾಲಿನ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ನಾನಾ ಕೃಷಿ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆಗೈದಿರುವ ರೈತ/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿಗಳು ಮತ್ತು ಬೆಳೆವೈವಿಧ್ಯಕರಣ/ಸಾವಯವ ಕೃಷಿ/ಕೃಷಿ ಯಂತ್ರೋಪಕರಣ ಅಭಿವೃದ್ಧಿ/ನೀರಿನ ಸಮರ್ಥ ಬಳಕೆ ಇನ್ನಿತರೆ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಅರ್ಹ ರೈತರು ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು.

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಹಾಗೂ ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆಪದ್ಧತಿ/ಸಮಗ್ರ ನೀರು ನಿರ್ವಹಣೆ/ಸಾವಯವ ಕೃಷಿ/ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ/ತೋಟಗಾರಿಕೆ/ ಹೈನುಗಾರಿಕೆ/ಕೋಳಿ ಸಾಕಾಣಿಕೆ/ಮೀನುಗಾರಿಕೆ/ರೇಷ್ಮೆ ಬೇಸಾಯ/ಹೈಟೆಕ್ ಹಸಿರು ಮನೆ ಅಳವಡಿಕೆ/ಕೃಷಿ ಸಂಸ್ಕರಣೆ/ಅರಣ್ಯ ಕೃಷಿ/ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿರಬೇಕು. ಇದಕ್ಕೆ ಸಂಬಂಧಿಸಿದಂತೆ ಅರ್ಜಿಗಳು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ/ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿದ್ದು, ರೈತರು ಭರ್ತಿಮಾಡಿದ ಅರ್ಜಿಗಳನ್ನು ಜುಲೈ 15 ರೊಳಗಾಗಿ ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿ/ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು.

ಹಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಹಾಯಕ ಕೃಷಿ ನಿರ್ದೇಶಕರು/ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಜಿಲ್ಲಾ ಆತ್ಮ ವಿಭಾಗದ ಯೋಜನಾ ನಿರ್ದೇಶಕರಾದ ಟಿ.ಎಸ್. ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande