ಬಳ್ಳಾರಿ, 25 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಂಡೂರು ತಾಲ್ಲೂಕು ಆಡಳಿತ ಇವರ ಸಂಯುಕ್ತಾಶಯದಲ್ಲಿ ದೋಣಿಮಲೈನ ಎನ್ಎಂಡಿಸಿ ಯಲ್ಲಿ ನಾನಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳ್ಳಾರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯು ಜೂನ್ 30 ರಿಂದ ಜುಲೈ 08 ರ ವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಸಂಡೂರು ತಾಲ್ಲೂಕಿನ ದೋಣಿಮಲೈ ನ ಸರ್ಕಾರಿ ಪ್ರೌಢ ಶಾಲೆಯಲ್ಲಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಿದ ಅಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವ ಬಗ್ಗೆ ಅರ್ಜಿಯ ಪ್ರತಿ ಮತ್ತು ಆಧಾರ್ ಕಾರ್ಡ್ನೊಂದಿಗೆ ನೇರವಾಗಿ ಮೇಲ್ಕಂಡ ಸ್ಥಳದಲ್ಲಿ ತರಬೇತಿಗೆ ಹಾಜರಾಗಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್